
ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಈ ವಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜಧಾನಿ ಬೆಂಗಳೂರು ಸೇರಿದಂತೆ ಕರಾವಳಿ ಜಿಲ್ಲೆಗಳು, ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಡಿಸೆಂಬರ್ 2ರವರೆಗೆ ಮಳೆಯಾಗುವ ಸಾಧ್ಯತೆ ಇದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಉತ್ತರ ಕರ್ನಾಟಕದ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ವಿಜಯಪುರ, ಬಳ್ಳಾರಿ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಉಳಿದಂತೆ ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲೂ ಮಳೆಯಾಗುವ ನಿರೀಕ್ಷೆ ಇದೆ.