alex Certify Rain In Karnataka : ರಾಜ್ಯದ ಈ ಜಿಲ್ಲೆಗಳಲ್ಲಿ ಮೂರು ದಿನ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Rain In Karnataka : ರಾಜ್ಯದ ಈ ಜಿಲ್ಲೆಗಳಲ್ಲಿ ಮೂರು ದಿನ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು : ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪರಿಣಾಮ ರಾಜ್ಯದ ಕರಾವಳಿ ಜಿಲ್ಲೆಗಳು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮೂರು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳು ಸೇರಿದಂತೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಹಾಸನ, ಮಂಡ್ಯ, ಮೈಸೂರು,ಚಿಕ್ಕಮಗಳೂರು, ಕೊಡಗು ಶಿವಮಗೊಗ ಜಿಲ್ಲೆಗಳಲ್ಲಿ ಡಿಸೆಂಬರ್‌ 17 ರ ಇಂದಿನಿಂದ ಡಿಸೆಂಬರ್ 19ರವರೆಗೆ‌ ಮಳೆಯಾಗುವ ಸಾಧ್ಯತೆ ಇದೆ.  ರಾಯಚೂರು, ವಿಜಯಪುರ, ಬಾಗಲಕೋಟೆ, ಕಲಬುರಗಿ, ಯಾದಗಿರಿ, ಕೊಪ್ಪಳ ಜಿಲ್ಲೆಗಳಲ್ಲಿ ನಾಳೆಯಿಂದ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...