ಬೆಂಗಳೂರು : ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪರಿಣಾಮ ಬೆಂಗಳುರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಿದೆ. ಮುಂದಿನ ಎರಡು ದಿನ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲಿ ಗುಡು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಃಇತಿ ನೀಡಿದೆ.
ಉಳಿದಂತೆ ಬೆಂಗಳುರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಮೈಸೂರು, ಹಾಸನ, ರಾಮನಗರ, ತುಮಕೂರು, ಚಿತ್ರದುರ್ಗ, ಶಿವಮೊಗ್ಗ, ಬೆಳಗಾವಿ, ಕಲಬುರಗಿ, ವಿಜಯಪುರ ಜಿಲ್ಲೆಗಳಲ್ಲಿ ತುಂತುರು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.