
ಬೆಂಗಳೂರು : ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹಲವು ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ರಾಜ್ಯಾದ್ಯಂತ ಕಳೆದ ಮೂರು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಇನ್ನೂ ಮೂರ್ನಾಲ್ಕು ದಿನ ಮಳೆ ಮುಂದುವರೆಯುವ ಸಾಧ್ಯತೆ ಇದ್ದು, ಮುಂದಿನ 24 ಗಂಟೆಯಲ್ಲಿ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆ ಹಾಗೂ ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ಮೈಸೂರು, ತುಮಕೂರು ಹಾಗೂ ಗದಗ, ಹಾವೇರಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯಲ್ಲೋ ಅಲರ್ಟ್ ಘೋಷಿಸಲಾಗಿದೆ.