ಹಾಸನ: ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರ ಬಂದ್ ಆದೇಶವನ್ನು ವಾಪಸ್ ಪಡೆಯಲಾಗಿದೆ. ವಾಹನ ಸಂಚಾರ ಬಂದ್ ಆದೇಶದಿಂದ ಸಮಸ್ಯೆಯಾಗಲಿರುವ ಹಿನ್ನಲೆಯಲ್ಲಿ ಬೆಳಗ್ಗೆ 6 ರಿಂದ ಸಂಜೆ 6 ಗಂಟೆಯವರೆಗೆ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ.
ಸಕಲೇಶಪುರ ಉಪವಿಭಾಗಾಧಿಕಾರಿ ಶ್ರುತಿ ಆದೇಶ ಹೊರಡಿಸಿದ್ದಾರೆ. ಸಂಚಾರ ಸ್ಥಗಿತವಾದರೆ ಸಮಸ್ಯೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ನಿರ್ಬಂಧಿತ ನಿಯಮಗಳ ಅಡಿ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಹಾಸನ ಜಿಲ್ಲಾಡಳಿತ ವಾಹನ ಸಂಚಾರ ಬಂದ್ ಆದೇಶ ಹಿಂಪಡೆದುಕೊಂಡಿದೆ.
ಬೆಂಗಳೂರು -ಮಂಗಳೂರು ಹೆದ್ದಾರಿಯ ಹಾಸನದಿಂದ ಮಾರನಹಳ್ಳಿಯವರೆಗಿನ ರಸ್ತೆಯಲ್ಲಿ ಅಹಿತಕರ ಘಟನೆಗಳು ನಡೆಯದಂತೆ ತಡೆಯುವ ಸಲುವಾಗಿ, ಸಾರ್ವಜನಿಕರ ಹಿತದೃಷ್ಟಿಯಿಂದ ಮುನ್ನೆಚ್ಚರಿಕೆ ಕ್ರಮವಾಗಿ ಜುಲೈ 18ರಿಂದ ದುರಸ್ತಿ ಕಾರ್ಯ ಪೂರ್ಣಗೊಳ್ಳುವವರೆಗೆ ಎಲ್ಲಾ ರೀತಿಯ ವಾಹನ ಸಂಚಾರ ನಿರ್ಬಂಧಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದರು.