ಬೆಂಗಳೂರು: ರಾಜ್ಯದಲ್ಲಿ ಇನ್ನೂ 5 ದಿನಗಳ ಕಾಲ ಬಹುತೇಕ ಭಾಗಗಳಲ್ಲಿ ಮಳೆಯಾಗಲಿದೆ. ಪೂರ್ವ ಮುಂಗಾರು ಚುರುಕಾಗಿದ್ದು, ದಕ್ಷಿಣ ಒಳನಾಡು ಮತ್ತು ಬೆಂಗಳೂರಿನಲ್ಲಿ ಮಳೆ ಆಗಲಿದೆ ಎಂದು ಭಾರತೀಯ ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ಕೋಲಾರ, ತುಮಕೂರು, ಮೈಸೂರು, ಮಂಡ್ಯ, ಹಾಸನ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಚಾಮರಾಜನಗರ ಜಿಲ್ಲೆಗಳಲ್ಲಿ ಮಳೆ ಮುಂದುವರೆಯುವ ಮುನ್ಸೂಚನೆ ನೀಡಲಾಗಿದೆ. ರಾಜ್ಯದ ಮಲೆನಾಡು, ಕರಾವಳಿ, ಉತ್ತರ ಕರ್ನಾಟಕ ಭಾಗದ ಕೆಲವು ಕಡೆ ಚದುರಿದಂತೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.