alex Certify ವಾಯುಭಾರ ಕುಸಿತ ಪರಿಣಾಮ ರಾಜ್ಯದಲ್ಲಿ ಎರಡು ದಿನ ಭಾರಿ ಮಳೆ, ಯೆಲ್ಲೋ ಅಲರ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಾಯುಭಾರ ಕುಸಿತ ಪರಿಣಾಮ ರಾಜ್ಯದಲ್ಲಿ ಎರಡು ದಿನ ಭಾರಿ ಮಳೆ, ಯೆಲ್ಲೋ ಅಲರ್ಟ್

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ತಮಿಳುನಾಡು, ಆಂಧ್ರಪ್ರದೇಶದ ಹಲವೆಡೆ ಭಾರಿ ಮಳೆಯ ಆರ್ಭಟ ಮುಂದುವರೆದಿದೆ.

ರಾಜ್ಯದಲ್ಲಿ ಎರಡು ದಿನಗಳ ಕಾಲ ಹೆಚ್ಚಿನ ಮಳೆಯಾಗಲಿದೆ. ಅನೇಕ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ನವೆಂಬರ್ 11, 12 ರಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ನವೆಂಬರ್ 9 ರಂದು ಕೆಲವು ಕಡೆ ಗುಡುಗು, ಸಿಡಿಲು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ರಾಮನಗರ, ಚಿಕ್ಕಬಳ್ಳಾಪುರ, ಮೈಸೂರು, ಕೋಲಾರ, ಮಂಡ್ಯ, ಚಾಮರಾಜನಗರ ಮತ್ತು ಮಲೆನಾಡಿನ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಹಾಸನ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...