ಬೆಂಗಳೂರು: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮುಂಗಾರು ಮಳೆ ಮತ್ತೆ ಚುರುಕು ಪಡೆದಿದೆ. ಐದು ದಿನಗಳ ಕಾಲ ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಜು. 13, 14 ರಂದು ರೆಡ್ ಅಲರ್ಟ್, ಜುಲೈ 15, 16ರಂದು ಆರೆಂಜ್ ಅಲರ್ಟ್ ನೀಡಲಾಗಿದೆ.
ಉತ್ತರ ಒಳನಾಡಿನ ಬೆಳಗಾವಿಯಲ್ಲಿ ಐದು ದಿನ ಯೆಲ್ಲೋ ಅಲರ್ಟ್ ನೀಡಲಾಗಿದೆ. ಕಲಬುರಗಿ, ರಾಯಚೂರು, ವಿಜಯಪುರ ಜಿಲ್ಲೆಗಳಿಗೆ ಜುಲೈ 14, 15ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಜುಲೈ 14ರಂದು ಯಾದಗಿರಿ, ಜುಲೈ 15ರಂದು ಬಾಗಲಕೋಟೆ, ಬೀದರ್ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಂಭವ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಆರೆಂಜ್ ಅಲರ್ಟ್ ನೀಡಲಾಗಿದೆ. ಜುಲೈ 14, 16 ರಂದು ಹಾಸನ ಜಿಲ್ಲೆಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.