ಬೆಂಗಳೂರು: ಕರಾವಳಿ ಭಾಗದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಶಾಲೆಗಳಿಗೆ ರಜೆ ನೀಡುವ ಅಧಿಕಾರವನ್ನು ಜಿಲ್ಲಾಧಿಕಾರಿಗಳಿಗೆ ನೀಡಲಾಗಿದೆ. ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನೆಲೆ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ, ಪದವಿಪೂರ್ವ ಮತ್ತು ಪದವಿ ಕಾಲೇಜುಗಳಿಗೆ ಮುನ್ನೆಚ್ಚರಿಕೆ ಕ್ರಮವಾಗಿ ರಜೆ ನೀಡಲಾಗಿದೆ.
ಮಂಗಳೂರು ನಗರದ ಹಲವೆಡೆ ಭಾರೀ ಮಳೆ ಕಾರಣ ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಜನವಸತಿ ಪ್ರದೇಶಗಳಿಗೆ ನೀರು ನುಗ್ಗಿ ಜನ ಜೀವನ ಅಸ್ತವ್ಯಸ್ತಗೊಂಡಿದೆ.