alex Certify ಗಮನಿಸಿ…! ರಾಜ್ಯದ ಹಲವೆಡೆ ಇಂದು ಭಾರೀ ಮಳೆ ಸಾಧ್ಯತೆ ಹಿನ್ನಲೆ ಯೆಲ್ಲೋ ಅಲರ್ಟ್ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ…! ರಾಜ್ಯದ ಹಲವೆಡೆ ಇಂದು ಭಾರೀ ಮಳೆ ಸಾಧ್ಯತೆ ಹಿನ್ನಲೆ ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದ ಕರಾವಳಿ ಮತ್ತು ಉತ್ತರ ಒಳನಾಡು ಭಾಗದಲ್ಲಿ ಗುಡುಗು-ಸಿಡಿಲು ಸಹಿತ ಇಂದು ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದಲ್ಲಿ ಪೂರ್ವ ಮುಂಗಾರು ಶುರುವಾಗಿದೆ. ನೈಋತ್ಯ ಮುಂಗಾರು ಮಾರುತಗಳು ಜೂನ್ ಮೊದಲ ವಾರದಲ್ಲಿ ರಾಜ್ಯಕ್ಕೆ ಪ್ರವೇಶಿಸಲಿವೆ. ಈ ಕಾರಣದಿಂದ ಮುಂದಿನ 5 ದಿನಗಳ ಕಾಲ ರಾಜ್ಯದಲ್ಲಿ ಮಳೆಯಾಗುವ ಮುನ್ಸೂಚನೆ ಇದೆ.

ಭಾನುವಾರ ಉತ್ತರ ಒಳನಾಡಿನ ಬೆಳಗಾವಿ, ಗದಗ, ಧಾರವಾಡ ಮತ್ತು ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ವ್ಯಾಪ್ತಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ದಕ್ಷಿಣ ಒಳನಾಡು ಜಿಲ್ಲೆಗಳಾದ ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು ಭಾಗದಲ್ಲಿ ಹೆಚ್ಚು ಮಳೆಯಾಗಲಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...