ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೆ ಮಳೆ ಆರಂಭಗೊಂಡಿದ್ದು, ವಾಹನ ಸವಾರರು ಪರದಾಡಿದ್ದಾರೆ.
ಬೆಂಗಳೂರಿನಲ್ಲಿ ಮಧ್ಯಾಹ್ನದ ವೇಳೆಗೆ ದಟ್ಟ ಮೋಡ ಕವಿದು ಮಳೆಯಾಗುತ್ತಿದೆ. ವಿಧಾನಸೌಧ, ಮೆಜೆಸ್ಟಿಕ್, ಕೆ ಆರ್ ಸರ್ಕಲ್ ಸೇರಿದಂತೆ ಹಲವು ಕಡೆ ಮತ್ತೆ ಮಳೆಯಾಗುತ್ತಿದೆ. ಮತ್ತೆ ಮಳೆ ಬಂದ ಹಿನ್ನೆಲೆ ವಾಹನ ಸವಾರರು ಅದರಲ್ಲೂ ಬೈಕ್ ಸವಾರರು ಪರದಾಡಿದ್ದಾರೆ.
ಬೆಂಗಳೂರಿನಲ್ಲಿ ಸುರಿದ ಭಾರಿ ಮಳೆಗೆ ರಸ್ತೆಗಳು ಕೆರೆಯಂತಾಗಿದ್ದು, ಮಳೆ ಜನರನ್ನು ಹೈರಾಣಾಗಿಸಿದೆ. ಮತ್ತೆ ಮಳೆ ಆರಂಭವಾದ ಹಿನ್ನೆಲೆ ಜನರಲ್ಲಿ ಪ್ರವಾಹ ಭೀತಿ ಸೃಷ್ಟಿಯಾಗಿದೆ.