
ಬೆಂಗಳೂರು: ಮುಂದಿನ 24 ಗಂಟೆಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಎಂದು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯಿಂದ ಮುನ್ಸೂಚನೆ ನೀಡಲಾಗಿದೆ.
ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾದ ಹಿನ್ನೆಲೆಯಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಉತ್ತರ ಒಳನಾಡು, ಕರಾವಳಿ ಪ್ರದೇಶದಲ್ಲಿ ಮುಂದಿನ 24 ಗಂಟೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಉಷ್ಣಾಂಶ ಏರಿಳಿತ, ತಾಪಮಾನ ಹೆಚ್ಚಳ ಜೊತೆಗೆ ಮೇಲ್ಮೈ ಸುಳಿಗಾಳಿ ಕಾರಣ ಹಲವೆಡೆ ಮಳೆಯಾಗಲಿದೆ ಎಂದು ಹೇಳಲಾಗಿದೆ.