ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇನ್ನೂ ಐದು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜಧಾನಿ ಬೆಂಗಳೂರಿನಲ್ಲಿ ನಾಳೆ ಕೂಡ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನಲ್ಲಿ ಇಂದು ಮತ್ತು ನಾಳೆ ಗುಡುಗು ಸಹಿತ ಮಳೆಯಾಗಲಿದೆ. ಉತ್ತರ ಒಳನಾಡಿನಲ್ಲಿ ಕೂಡ ಇನ್ನೂ 5 ದಿನ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯಲ್ಲಿ ಮೇ 11, 12 ರಂದು ಭಾರಿ ಮಳೆಯಾಗಲಿದೆ ಎಂದು ಹೇಳಲಾಗಿದೆ.