
ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಬಿಪೊರ್ ಜಾಯ್ ಚಂಡಮಾರುತ ಅಬ್ಬರಿಸುತ್ತಿದೆ. ತೀವ್ರ ಸ್ವರೂಪ ಪಡೆದ ಚಂಡಮಾರುತದಿಂದ ಹಲವು ರಾಜ್ಯಗಳಲ್ಲಿ ಭಾರಿ ಮಳೆ ಆಗಲಿದೆ.
ಮೂರ್ನಾಲ್ಕು ದಿನಗಳಲ್ಲಿ ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮಳೆಯಾಗುವ ಸಂಭವವಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದ ಕರಾವಳಿ ಮತ್ತು ಒಳನಾಡಿನಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇದೆ.
ಗೋವಾ, ಕೇರಳ, ಲಕ್ಷದ್ವೀಪ, ತಮಿಳುನಾಡು, ಆಂಧ್ರಪ್ರದೇಶ, ರಾಜಸ್ಥಾನ, ಈಶಾನ್ಯ ರಾಜ್ಯಗಳಾದ ಅಸ್ಸಾಂ, ಮೀಜೋರಾಂ, ಮಣಿಪುರ. ಅರುಣಾಚಲ ಪ್ರದೇಶ. ಮೇಘಾಲಯಗಳಲ್ಲಿಯೂ ಮಳೆಯಾಗುವ ಸಾಧ್ಯತೆ ಇದೆ. ಭಾರಿ ಮಳೆ ಕಾರಣ ಮುನ್ನೆಚ್ಚರಿಕೆ ವಹಿಸಲು ರಾಜ್ಯಗಳಿಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.