ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆ ಕಡಿಮೆಯಾದರೂ ಬಿರುಗಾಳಿ ಹಿನ್ನಲೆಯಲ್ಲಿ ಆರು ತಾಲೂಕಿನ ಶಾಲಾ, ಕಾಲೇಜುಗಳಿಗೆ ನಾಳೆ ರಜೆ ನೀಡಲಾಗಿದೆ.
ಚಿಕ್ಕಮಗಳೂರು, ಮೂಡಿಗೆರೆ, ಕಳಸ, ಶೃಂಗೇರಿ, ಎನ್.ಆರ್. ಪುರ, ಕೊಪ್ಪ ತಾಲೂಕಿನ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು, ಪದವಿಪೂರ್ವ, ಪದವಿ ಕಾಲೇಜುಗಳಿಗೆ ನಾಳೆ ರಜೆ ಘೋಷಣೆ ಮಾಡಲಾಗಿದೆ. ಮಳೆ, ಬಿರುಗಾಳಿ ಹಿನ್ನಲೆ ಮುನ್ನೆಚ್ಚರಿಕೆ ಕ್ರಮವಾಗಿ ನಾಳೆ ರಜೆ ನೀಡಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.