ಬೆಂಗಳೂರು: ಮುಂದಿನ ಎರಡು ದಿನಗಳ ಕಾಲ ಗುಡುಗು ಸಹಿತ ಕರಾವಳಿ ಹಾಗೂ ಒಳನಾಡಿನ ಜಿಲ್ಲೆಗಳಲ್ಲಿ ಅಲ್ಲಲ್ಲಿ ಬಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
10 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಉತ್ತರ ಕನ್ನಡ, ಹಾವೇರಿ, ಶಿವಮೊಗ್ಗ, ಉಡುಪಿ, ಬೆಳಗಾವಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಕೊಡಗು, ಹಾಸನ ಜಿಲ್ಲೆಗಳಲ್ಲಿ ಬುಧವಾರ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕರಾವಳಿಯ ಬಹುತೇಕ ಭಾಗ ಮತ್ತು ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಗುಡುಗು ಸಹಿತ ಮಳೆಯಾಗಲಿದೆ. ಕರಾವಳಿ ಭಾಗದಲ್ಲಿ ಬಿರುಗಾಳಿ ವೇಗ ಗಂಟೆಗೆ 40 ರಿಂದ 50 ಕಿಲೋಮೀಟರ್ ವರೆಗೆ ತಲುಪುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.