ಬೆಂಗಳೂರು : ಕರ್ನಾಟಕದ ಕರಾವಳಿ ಭಾಗದಲ್ಲಿ ಮಳೆಯ ಅಬ್ಬರ ಹೆಚ್ಚಾಗಿದ್ದು,ಜುಲೈ 16 ರವರೆಗೆ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಭಾಗದ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ 5 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗದಲ್ಲೂ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಉಳಿದಂತೆ ಉತ್ತರ ಕರ್ನಾಟಕದ ಧಾರವಾಡ, ಗದಗ, ಬೆಳಗಾವಿ, ಹಾವೇರಿ, ದಾವಣಗೆರೆ ಜಿಲ್ಲೆಗಳಲ್ಲೂ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.