alex Certify ಮಳೆ ನೀರು ಸಂಗ್ರಹಕ್ಕೆ ಮಹತ್ವದ ಹೆಜ್ಜೆ: ಸಿಎಂ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಳೆ ನೀರು ಸಂಗ್ರಹಕ್ಕೆ ಮಹತ್ವದ ಹೆಜ್ಜೆ: ಸಿಎಂ ಮಾಹಿತಿ

ಬೆಳಗಾವಿ(ವಿಧಾನಸೌಧ): ಎಲ್ಲೆಲ್ಲಿ ಸಾಧ್ಯವೋ ಅಲ್ಲಲ್ಲಿ ಮಳೆ ನೀರು ಸಂಗ್ರಹಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ವಿಧಾನಪರಿಷತ್ ನಲ್ಲಿ ಮಾತನಾಡಿದ ಅವರು, ಈಗಾಗಲೇ ಮನೆಗಳಲ್ಲಿ ಮಳೆ ನೀರು ಸಂಗ್ರಹ ಮಾಡಲಾಗುತ್ತಿದೆ. ಸಾರ್ವಜನಿಕ ಸ್ಥಳಗಳಲ್ಲಿ ಮಳೆ ನೀರು ಸಂಗ್ರಹಿಸಲು ಸಲಹೆ ಬಂದಿದ್ದು, ಕೆಲವೊಂದು ಕಡೆ ಕಷ್ಟ, ಎಲ್ಲೆಲ್ಲಿ ಸಾಧ್ಯವೋ ಅಲ್ಲಿ ಮಳೆನೀರು ಸಂಗ್ರಹ ಮಾಡಲಾಗುವುದು ಎಂದು ಹೇಳಿದ್ದಾರೆ.

ಕೆರೆಗಳ ಜಾಗದಲ್ಲಿ ನೀರು ಸಂಗ್ರಹಿಸಲು ಕ್ರಮ ಕೈಗೊಳ್ಳಲಾಗುವುದು. ಖಾಸಗಿಯವರಿಗೆ ಪ್ರೋತ್ಸಾಹ ನೀಡಿ ಮಳೆ ನೀರು ಸಂಗ್ರಹಕ್ಕೆ ಒತ್ತು ನೀಡಲಿದ್ದು, ಸಾರ್ವಜನಿಕ ಆಂದೋಲನ ಮಾಡುವ ಮೂಲಕ ನೀರು ಸಂಗ್ರಹಕ್ಕೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...