ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಆರ್ಭಟಕ್ಕೆ ಇಬ್ಬರು ಬಲಿಯಾಗಿದ್ದಾರೆ. ಕುಮಟಾ ತಾಲೂಕಿನ ಬರ್ಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೆಟ್ಗೂಳಿ ಗ್ರಾಮದಲ್ಲಿ ಗದ್ದೆಗೆ ನುಗ್ಗಿದ ಮಳೆ ನೀರಿನಲ್ಲಿ ಕೊಚ್ಚಿ ಹೋಗಿ ಇಬ್ಬರು ಸಾವು ಕಂಡಿದ್ದಾರೆ.
ಸತೀಶ ಪಾಂಡುರಂಗ ನಾಯಕ(40) ಉಲ್ಲಾಸ ಗಾವಡಿ(50) ಮೃತಪಟ್ಟವರು ಎಂದು ಹೇಳಲಾಗಿದೆ. ಭಾರಿ ಮಳೆಯಿಂದಾಗಿ ಭತ್ತದ ಗದ್ದೆಗಳು ಜಲಾವೃತಗೊಂಡು ರಭಸವಾಗಿ ನೀರು ಹರಿದಿದ್ದು, ಇಬ್ಬರೂ ನೀರಲ್ಲಿ ಕೊಚ್ಚಿ ಹೋಗಿದ್ದಾರೆ ಎನ್ನಲಾಗಿದೆ. ಗೋಕರ್ಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.