alex Certify ಪಾರ್ಲಿಮೆಂಟ್ ಒಳಗೆ ‘ಮಳೆ ನೀರು’ ಸೋರಿಕೆ, ಹೊರಗೆ ‘ಪ್ರಶ್ನೆಪತ್ರಿಕೆ’ ಸೋರಿಕೆ : ಕಾಂಗ್ರೆಸ್ ವ್ಯಂಗ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪಾರ್ಲಿಮೆಂಟ್ ಒಳಗೆ ‘ಮಳೆ ನೀರು’ ಸೋರಿಕೆ, ಹೊರಗೆ ‘ಪ್ರಶ್ನೆಪತ್ರಿಕೆ’ ಸೋರಿಕೆ : ಕಾಂಗ್ರೆಸ್ ವ್ಯಂಗ್ಯ

ಬೆಂಗಳೂರು : ಸೋರುತಿಹುದು ಸಂಸತ್ ಮಾಳಿಗೆ, ಅಜ್ಞಾನದಿಂದ, ಭ್ರಷ್ಟರಿಂದ ಸೋರುತಿಹುಹುದು ದೇಶದ ಮಾಳಿಗೆ. ಪಾರ್ಲಿಮೆಂಟ್ ಒಳಗೆ ಮಳೆ ನೀರು ಸೋರಿಕೆ, ಹೊರಗೆ ಪ್ರಶ್ನೆಪತ್ರಿಕೆ ಸೋರಿಕೆ ಎಂದು ಕಾಂಗ್ರೆಸ್ ಟ್ವೀಟ್ ನಲ್ಲಿ ವ್ಯಂಗ್ಯವಾಡಿದೆ.

ಸಂಸತ್ ಭವನಕ್ಕೆ ನೀರು ನುಗ್ಗಿದ ವಿಚಾರಕ್ಕೆ ಕಾಂಗ್ರೆಸ್ ಟ್ವೀಟ್ ನಲ್ಲಿ ವ್ಯಂಗ್ಯವಾಡಿದೆ.ಸೋರುತಿಹುದು ಸಂಸತ್ ಮಾಳಿಗೆ, ಅಜ್ಞಾನದಿಂದ, ಭ್ರಷ್ಟರಿಂದ ಸೋರುತಿಹುಹುದು ದೇಶದ ಮಾಳಿಗೆ.  ಪಾರ್ಲಿಮೆಂಟ್ ಒಳಗೆ ಮಳೆ ನೀರು ಸೋರಿಕೆ, ಹೊರಗೆ ಪ್ರಶ್ನೆಪತ್ರಿಕೆ ಸೋರಿಕೆ! 20,000 ಕೋಟಿ ವೆಚ್ಚದಲ್ಲಿ ನಿರ್ಮಿಸಿದ ಸೆಂಟ್ರಲ್ ವಿಸ್ತಾ ಎಂಬ ನೂತನ ಸಂಸತ್ ಭವನದ ಒಳಗೆ ಮೊದಲ ವರ್ಷಕ್ಕೆ ಮಳೆ ನೀರು ಸೋರಿಕೆಯಾಗಿದೆ.

ಅಚ್ಚೆ ದಿನಗಳ ವಿಕಾಸದಲ್ಲಿ ವಾರಕ್ಕೆ ಮೂರು ಸೇತುವೆಗಳು ಮುರಿದು ಬೀಳುತ್ತಿವೆ, ದಿನಕ್ಕೊಂದು ರೈಲು ಹಳಿ ತಪ್ಪುತ್ತಿವೆ, ರಾಮಮಂದಿರದೊಳಗೆ ನೀರು ಇಳಿಯುತ್ತಿದೆ, ಸಂಸತ್ ಭವನವೂ ಸೋರುತ್ತಿದೆ. ಮೋದಿಯವರ 10 ವರ್ಷದ ಆಡಳಿತದಲ್ಲಿ ಒಂದೇ ಒಂದು ಲೋಪವಿಲ್ಲದ ಕೆಲಸ ಆಗಿದೆಯೇ? ಎಂದು ಕಾಂಗ್ರೆಸ್ ಟ್ವೀಟ್ ನಲ್ಲಿ ವ್ಯಂಗ್ಯವಾಡಿದೆ.

 

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...