ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ರಾಜ್ಯದಲ್ಲಿ ಹಲವಡೆ ಮಳೆ ಜೊತೆಗೆ ಶೀತ ಗಾಳಿ ಬೀಸುತ್ತಿದೆ.
ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆಯಂತೆ ಭಾನುವಾರ ಮತ್ತು ಸೋಮವಾರ ದಕ್ಷಿಣ ಒಳನಾಡಿನ ಹಲವು ಪ್ರದೇಶಗಳಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇದೆ.
ಚಿಕ್ಕಮಗಳೂರು, ಕೊಡಗು, ಚಾಮರಾಜನಗರ, ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಕರಾವಳಿಯ ಎಲ್ಲಾ ಜಿಲ್ಲೆಗಳು ಮತ್ತು ಉತ್ತರ ಒಳನಾಡಿನ ಅನೇಕ ಜಿಲ್ಲೆಗಳಲ್ಲಿ ತುಂತುರು ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾಗಿದೆ. ನವೆಂಬರ್ 13ರಂದು ಅಂಡಮಾನ್ ನಿಕೋಬಾರ್ ದ್ವೀಪ, ಲಕ್ಷದ್ವೀಪ, ತಮಿಳುನಾಡು, ಪುದುಚೇರಿ ಪ್ರದೇಶದಲ್ಲಿ ಭಾರಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.