alex Certify ಗಮನಿಸಿ…! ಭಾರಿ ಮಳೆ ಹಿನ್ನಲೆ 4 ಜಿಲ್ಲೆಗಳಿಗೆ ಇಂದು, 10 ಜಿಲ್ಲೆಗಳಿಗೆ ನಾಳೆ ಯೆಲ್ಲೋ ಅಲರ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ…! ಭಾರಿ ಮಳೆ ಹಿನ್ನಲೆ 4 ಜಿಲ್ಲೆಗಳಿಗೆ ಇಂದು, 10 ಜಿಲ್ಲೆಗಳಿಗೆ ನಾಳೆ ಯೆಲ್ಲೋ ಅಲರ್ಟ್

ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಹಿನ್ನೆಲೆಯಲ್ಲಿ ಶನಿವಾರ 4 ಜಿಲ್ಲೆಗಳಿಗೆ, ಭಾನುವಾರ 10 ಜಿಲ್ಲೆಗಳಿಗೆ ಹವಾಮಾನ ಇಲಾಖೆಯಿಂದ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಶನಿವಾರ ಯಾದಗಿರಿ, ರಾಯಚೂರು, ಮೈಸೂರು, ಕಲ್ಬುರ್ಗಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಭಾನುವಾರ ದಾವಣಗೆರೆ, ಶಿವಮೊಗ್ಗ, ಬಳ್ಳಾರಿ, ತುಮಕೂರು, ಚಿತ್ರದುರ್ಗ, ಚಿಕ್ಕಮಗಳೂರು, ಮಂಡ್ಯ, ಕೊಡಗು, ಹಾಸನ, ಮೈಸೂರು ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಉತ್ತರ ಒಳನಾಡಿನ ಬೀದರ್, ಬೆಳಗಾವಿ, ಬಾಗಲಕೋಟೆ, ಹಾವೇರಿ, ರಾಯಚೂರು, ಕಲ್ಬುರ್ಗಿ, ಕೊಪ್ಪಳ, ಯಾದಗಿರಿ, ವಿಜಯಪುರ ಹಾಗೂ ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ, ರಾಮನಗರ, ಮೈಸೂರು, ತುಮಕೂರು, ಚಿಕ್ಕಮಗಳೂರು ಮೊದಲಾದ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಜಿಲ್ಲೆಗಳಲ್ಲಿಯೂ ಒಂದೆರಡು ಕಡೆ ಗುಡುಗು ಸಹಿತ ಮಳೆಯಾಗುವ ಸಂಭವ ಇದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...