alex Certify ಗಮನಿಸಿ..! ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಪರಿಣಾಮ ರಾಜ್ಯದ ಹಲವೆಡೆ ಭಾರೀ ಮಳೆ ಸಾಧ್ಯತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ..! ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಪರಿಣಾಮ ರಾಜ್ಯದ ಹಲವೆಡೆ ಭಾರೀ ಮಳೆ ಸಾಧ್ಯತೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ತೀವ್ರಗೊಂಡ ಪರಿಣಾಮ ರಾಜ್ಯದ ವಿವಿಧೆಡೆ ತುಂತುರು ಮಳೆಯಾಗುತ್ತಿದೆ. ಜನವರಿ 9 ರವರೆಗೆ ರಾಜ್ಯದ ಅನೇಕ ಭಾಗದಲ್ಲಿ ಮೋಡಕವಿದ ವಾತಾವರಣ ಇರುತ್ತದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಜನವರಿ 7 ರಂದು ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡು ಭಾಗದ ಕೊಡಗು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ 64.5 ಮಿಲಿಮೀಟರ್ ನಿಂದ 115 ಮಿಲಿಮೀಟರ್ ವರೆಗೆ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಜನವರಿ 9 ರ ವರೆಗೆ ಬಹುತೇಕ ಭಾಗಗಳಲ್ಲಿ ಮೋಡ ಕವಿದ ವಾತಾವರಣವಿರಲಿದ್ದು, ಚದುರಿದಂತೆ ತುಂತುರು ಮಳೆಯಾಗಲಿದೆ. ಜನವರಿ 8 ರಂದು ರಾಜ್ಯದ ಕರಾವಳಿ ಮತ್ತು ಉತ್ತರ ಒಳನಾಡಿನ ಅನೇಕ ಕಡೆ ಮೋಡ ಕವಿದ ಮತ್ತು ಚಳಿಯ ವಾತಾವರಣವಿರುತ್ತದೆ. ಇದರೊಂದಿಗೆ ತುಂತುರು ಮಳೆ ಆಗುತ್ತದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...