ಬೆಂಗಳೂರು: ಕರಾವಳಿಯ ಬಹುತೇಕ ಭಾಗಗಳಲ್ಲಿ ಮುಂದಿನ ಒಂದು ವಾರ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯಿಂದ ಮುನ್ಸೂಚನೆ ನೀಡಲಾಗಿದೆ. ಬುಧವಾರ ಕರಾವಳಿಯ ಬಹುತೇಕ ಭಾಗದಲ್ಲಿ, ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ಹಲವು ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಗುರುವಾರ ಮತ್ತು ಶುಕ್ರವಾರ ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಹಾಗೂ ಮಲೆನಾಡು ಭಾಗದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವುದರಿಂದ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮುಂದಿನ ಒಂದು ವಾರ ದಕ್ಷಿಣ ಮತ್ತು ಉತ್ತರ ಒಳನಾಡಿನ ಹಲವು ಕಡೆ ಮಳೆ ಮುಂದುವರೆಯಲಿದೆ ಎನ್ನಲಾಗಿದೆ.