ಬೆಂಗಳೂರು: ರಾಜ್ಯದ ಕರಾವಳಿ, ಮಲೆನಾಡು ಜಿಲ್ಲೆಗಳ ಬಹುತೇಕ ಭಾಗದಲ್ಲಿ ಭಾನುವಾರ ಹೆಚ್ಚಿನ ಮಳೆಯಾಗಿದೆ. ಇನ್ನು ಎರಡು ಮೂರು ದಿನ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮನ್ಸೂಚನೆ ನೀಡಿದೆ.
ಸೆ. 30ರಂದು ರಾಜ್ಯಾದ್ಯಂತ ವ್ಯಾಪಕ ಮಳೆ ಆಗುವ ಸಂಭವ ಇದೆ. ಮಲೆನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ, ದಕ್ಷಿಣ ಒಳನಾಡಿದನ ಗದಗ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ಮೈಸೂರು, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಅ. 1ರಂದು ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಂಭವ ಇದ್ದು, ಮಲೆನಾಡಿನ ಕೊಡಗು, ಚಿಕ್ಕಮಗಳೂರು, ಹಾಸನ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉಳಿದಂತೆ ದಕ್ಷಿಣ ಒಳನಾಡು, ಕರಾವಳಿ, ಉತ್ತರ ಒಳನಾಡಿನ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ.