ಬೆಂಗಳೂರು: ರಾಜ್ಯದ ಹಲವೆಡೆ ಭಾರಿ ಮಳೆ ಆಗುವ ಮುನ್ಸೂಚನೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.
ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಮುಂದಿನ 24 ಗಂಟೆಗಳ ಅವಧಿಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಅಕ್ಟೋಬರ್ 13 ರಂದು ಶುಕ್ರವಾರ ಮಲೆನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಕರಾವಳಿಯ ಉತ್ತರ ಕನ್ನಡ ಭಾಗದಲ್ಲಿ 7 ಸೆ.ಮೀ.ವರೆಗೆ ಮಳೆಯಾಗುವ ಸಂಭವ ಇರುವುದರಿಂದ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.