
ಬೆಂಗಳೂರು: ರಾಜ್ಯದ 14ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಅಕ್ಟೋಬರ್ 24ರ ವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮನ್ಸೂಚನೆ ನೀಡಿದೆ.
ಮೈಸೂರು, ಕೊಡಗು ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಂಭವ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉತ್ತರ ಮತ್ತು ದಕ್ಷಿಣ ಒಳನಾಡಿನ ಚಾಮರಾಜನಗರ, ಹಾಸನ, ಮಂಡ್ಯ, ಧಾರವಾಡ, ಬೆಳಗಾವಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹೇಳಲಾಗಿದೆ.
ದಕ್ಷಿಣ ಒಳನಾಡಿನಲ್ಲಿ ಹಲವೆಡೆ ಹೆಚ್ಚಿನ ಮಳೆಯಾಗಿದೆ. ಉತ್ತರ ಒಳನಾಡಿನಲ್ಲಿ ಮಳೆ ದುರ್ಬಲವಾಗಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಭಾಗದಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಂಭವ ಇದೆ.