ಬೆಂಗಳೂರು: ಮುಂದಿನ 48 ಗಂಟೆಯಲ್ಲಿ ರಾಜ್ಯದ 14 ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಂಭವ ಹಿನ್ನೆಲೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ನೀಡಿದೆ.
ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಒಳನಾಡಿನ ಬಾಗಲಕೋಟೆ, ಬೀದರ್, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ದಕ್ಷಿಣ ಒಳನಾಡಿನ ಚಿತ್ರದುರ್ಗ, ದಾವಣಗೆರೆ, ಮಲೆನಾಡಿನ ಶಿವಮೊಗ್ಗ ಜಿಲ್ಲೆಗಳಲ್ಲಿ 6ರಿಂದ 12 ಸೆಂ.ಮೀ. ವರೆಗೆ ಮಳೆಯಾಗುವ ಸಾಧ್ಯತೆ ಇದೆ.
ಆಗಸ್ಟ್ 17, 18 ರಂದು ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಬೆಂಗಳೂರು ಸೇರಿ ಕೆಲವೆಡೆ ಆಗಸ್ಟ್ 21ರವರೆಗೆ ಸಾಧಾರಣ ಮಳೆಯಾಗಲಿದ್ದು, ಮತ್ತೆ ಕೆಲವು ಕಡೆ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ. ಮೂರ್ನಾಲ್ಕು ದಿನಗಳ ಬಳಿಕ ಮಳೆ ಇಳಿಮುಖವಾಗುವ ಸಂಭವ ಇದೆ.