alex Certify ಇಂದಿನಿಂದ ಮೂರು ದಿನ ಭಾರಿ ಮಳೆ ಮುನ್ಸೂಚನೆ: ಮಲೆನಾಡು, ಕರಾವಳಿ ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದಿನಿಂದ ಮೂರು ದಿನ ಭಾರಿ ಮಳೆ ಮುನ್ಸೂಚನೆ: ಮಲೆನಾಡು, ಕರಾವಳಿ ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಣೆ

ಬೆಂಗಳೂರು: ರಾಜ್ಯದ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನ ಹೆಚ್ಚಿನ ಮಳೆ ಆಗಲಿದೆ. ಕರಾವಳಿಯಲ್ಲಿ ಸೋಮವಾರದಿಂದ ಮೂರು ದಿನ ವ್ಯಾಪಕ ಮಳೆ ಆಗಲಿದ್ದು, ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 9 ಮತ್ತು 10ರಂದು ಹೆಚ್ಚಿನ ಮಳೆಯಾಗಲಿದೆ. ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಂಭವ ಹಿನ್ನಲೆಯಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಸೆಪ್ಟೆಂಬರ್ 9, 10ರಂದು ಉತ್ತರ ಒಳನಾಡಿನಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾನುವಾರ ಕಲಬುರಗಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ ಜಿಲ್ಲೆಯ ಹಲವೆಡೆ ಮಳೆಯಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...