alex Certify ಗಮನಿಸಿ: ರಾಜ್ಯದ ವಿವಿಧೆಡೆ 4 ದಿನ ಮಳೆ: ಕೆಲ ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ: ರಾಜ್ಯದ ವಿವಿಧೆಡೆ 4 ದಿನ ಮಳೆ: ಕೆಲ ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’

ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡಿನ 9 ಜಿಲ್ಲೆಗಳಲ್ಲಿ ಮುಂದಿನ 4 ದಿನಗಳ ಕಾಲ ಮಳೆಯಾಗುವ ಸಂಭವ ಇದ್ದು, ಈ ಜಿಲ್ಲೆಗಳಿಗೆ ಹವಾಮಾನ ಇಲಾಖೆಯಿಂದ ಯೆಲ್ಲೋ ಅಲರ್ಟ್ ನೀಡಲಾಗಿದೆ.

ನ. 4ರಂದು ಕೊಡಗು ಜಿಲ್ಲೆಯಲ್ಲಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ.

ನ. 5 ರಂದು ಕೊಡಗು, ಚಾಮರಾಜನಗರ, ಮೈಸೂರು, ಮಂಡ್ಯ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

ನ. 6 ರಂದು ಚಾಮರಾಜನಗರ, ರಾಮನಗರ, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

ನ. 7 ರಂದು ಶಿವಮೊಗ್ಗ, ತುಮಕೂರು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ನೀಡಲಾಗಿದೆ.

ಮುಂದಿನ ಒಂದು ವಾರದ ರಾಜ್ಯದ ದಕ್ಷಿಣ ಒಳನಾಡು, ಕರಾವಳಿ, ಮಲೆನಾಡು ಭಾಗದಲ್ಲಿ ಉತ್ತಮ ಮಳೆ ಆಗಲಿದೆ. ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...