ಬೆಂಗಳೂರು: ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನಲ್ಲಿ ಚದುರಿದಂತೆ ಹಗುರ ಮಳೆ ಆಗುವ ಸಂಭವ ಇದೆ. ಮಲೆನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗಿನ ಹಲವೆಡೆ ಚದುರಿದಂತೆ ವ್ಯಾಪಕವಾಗಿ ಮಳೆಯಾಗುವ ಸಂಭವ ಇದೆ. ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಕಲಬುರಗಿ, ವಿಜಯಪುರ, ಧಾರವಾಡ, ಬಾಗಲಕೋಟೆ, ಬೆಳಗಾವಿಯಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬೀದರ್, ರಾಯಚೂರು, ಕಲಬುರಗಿ, ಚಿಕ್ಕಮಗಳೂರು, ಶಿವಮೊಗ್ಗ, ಯಾದಗಿರಿ, ವಿಜಯಪುರ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಂಭವ ಇರುವುದರಿಂದ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.