
ಬೆಂಗಳೂರು: ರಾಜ್ಯದಲ್ಲಿ ಮುಂದಿನ 24 ಗಂಟೆ ಅವಧಿಯಲ್ಲಿ 6 ಜಿಲ್ಲೆಗಳಲ್ಲಿ ಭಾರಿ ಮಳೆ ಆಗುವ ಸಂಭವ ಇರುವುದರಿಂದ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ನೀಡಿದೆ.
ಉತ್ತರ ಒಳನಾಡಿನ ಕಲಬುರಗಿ, ಬೀದರ್, ಯಾದಗಿರಿ, ಕರಾವಳಿಯ ದಕ್ಷಿಣ ಕನ್ನಡ ಮತ್ತು ದಕ್ಷಿಣ ಒಳನಾಡಿನ ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ಸಂಭವ ಇದೆ.
ಸೆಪ್ಟೆಂಬರ್ 26ರಂದು ವಿಜಯನಗರ, ಸೆಪ್ಟಂಬರ್ 28ರಂದು ವಿಜಯನಗರ, ಕೊಪ್ಪಳ, ರಾಯಚೂರು, ಸೆಪ್ಟೆಂಬರ್ 29ರಂದು ದಕ್ಷಿಣ ಕನ್ನಡ, ಧಾರವಾಡ, ಬೆಳಗಾವಿ, ರಾಯಚೂರು, ಕಲಬುರಗಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ರಾಜ್ಯದ ಎಲ್ಲಾ ಭಾಗದಲ್ಲಿ ಮುಂದಿನ 7 ದಿನ ಉತ್ತಮ ಮಳೆ ಆಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮನ್ಸೂಚನೆ ನೀಡಿದೆ.