ಮುಂಬೈ: ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ-ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ ಕುಂದ್ರಾ ಅವರ ಮುಂಬೈನ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿ, ದಾಖಲೆ ಪರಿಶೀಲನೆ ನಡೆಸಿದ್ದಾರೆ.
ಪೋರ್ನ್ ಚಿತ್ರಗಳ ನಿರ್ಮಾಣಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣದ ಮೇಲೆ ರಾಜ್ ಕುಂದ್ರಾ ಅವರ ಮನೆ ಮೇಲೆ ಇಡಿ ದಾಳಿ ನಡೆದಿದೆ ಎಂದು ತಿಳಿದುಬಂದಿದೆ. ಭಾರತೀಯ ದಂಡ ಸಂಹಿತೆ ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್‌ಗಳ ಅಡಿಯಲ್ಲಿ ಜುಲೈ 2021 ರಲ್ಲಿ ರಾಜ್ ಕುಂದ್ರಾ ಅವರನ್ನು ಮುಂಬೈ ಅಪರಾಧ ವಿಭಾಗವು ಬಂಧಿಸಿತ್ತು.
ಮೊಬೈಲ್ ಅಪ್ಲಿಕೇಶನ್‌ಗಳ ಮೂಲಕ ಅಶ್ಲೀಲ ಚಿತ್ರಗಳ ನಿರ್ಮಾಣ ಹಾಗೂ ಪ್ರಸಾರಕ್ಕೆ ಸಂಬಂಧಿಸಿದೆ ಅಕ್ರಮ ಹಣ ವರ್ಗಾವಣೀ ಪ್ರಕರಣ ಸಂಬಂಧ ಇಡಿ, ರಾಜ್ ಕುಂದ್ರಾ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದೆ. ಇದರ ಭಾಗವಾಗಿ ಇದೀಗ ದಾಳಿ ನಡೆದಿದೆ.
ಜುಲೈ 2021 ರಲ್ಲಿ ಮುಂಬೈ ಅಪರಾಧ ವಿಭಾಗವು ಭಾರತೀಯ ದಂಡ ಸಂಹಿತೆ ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್‌ಗಳ ಅಡಿಯಲ್ಲಿ ರಾಜ್ ಕುಂದ್ರಾ ಅವರನ್ನು ಬಂಧಿಸಿತ್ತು. ನಂತರ ಅವರಿಗೆ ನಗರದ ನ್ಯಾಯಾಲಯ ಜಾಮೀನು ನೀಡಿತ್ತು. ಈ ಪ್ರಕರಣದಲ್ಲಿ ತಮ್ಮ ವಿರುದ್ಧ ಬಂದಿರುವ ಎಲ್ಲಾ ಆರೋಪಗಳನ್ನು ಕುಂದ್ರಾ ನಿರಾಕರಿಸಿದ್ದರು.