
ಮುಂಬೈ: ಮಹಾರಾಷ್ಟ್ರ ನವನಿರ್ಮಾಣ ಸೇನೆ(ಎಂಎನ್‌ಎಸ್) ಅಧ್ಯಕ್ಷ ರಾಜ್ ಠಾಕ್ರೆ ಮಂಗಳವಾರ ಪ್ರಧಾನಿ ಮೋದಿಗೆ ‘ಬೇಷರತ್’ ಬೆಂಬಲ ಘೋಷಿಸಿದ್ದಾರೆ.
ಏಪ್ರಿಲ್ 19 ರಂದು ಪ್ರಾರಂಭವಾಗಲಿರುವ ಲೋಕಸಭಾ ಚುನಾವಣೆಗೆ ಮುನ್ನ ಶಿವಾಜಿ ಪಾರ್ಕ್‌ನಲ್ಲಿ ನಡೆದ ಬೃಹತ್ ರ‍್ಯಾಲಿಯಲ್ಲಿ ತಮ್ಮ ಪಕ್ಷದ ರಾಜಕೀಯ ಮಾರ್ಗಸೂಚಿಯನ್ನು ಘೋಷಿಸುವ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬೆಂಬಲ ಘೋಷಿಸಿದರು.
2024ರ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವಕ್ಕೆ ಠಾಕ್ರೆಯವರ ಬೆಂಬಲವನ್ನು ಬಿಜೆಪಿ ನಿರೀಕ್ಷಿಸುತ್ತದೆ ಎಂದು ಮಹಾರಾಷ್ಟ್ರದ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಈ ಹಿಂದೆ ಹೇಳಿದ್ದರು.
ಇಂದು ನಡೆದ ಮಹತ್ವದ ಬೆಳವಣಿಗೆಯಲ್ಲಿ ಮಹಾರಾಷ್ಟ್ರ ನವನಿರ್ಮಾಣ ಸೇನೆ(ಎಂಎನ್‌ಎಸ್) ಮುಖ್ಯಸ್ಥ ರಾಜ್ ಠಾಕ್ರೆ ಅವರು ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ಮೋದಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟಕ್ಕೆ(ಎನ್‌ಡಿಎ) ಬೆಂಬಲ ನೀಡುವುದಾಗಿ ಘೋಷಿಸಿದ್ದಾರೆ.