alex Certify ಯೂಟ್ಯೂಬ್ ನಲ್ಲಿ ಧೂಳೆಬ್ಬಿಸಿದ ‘ರಾಜ ಮಾರ್ತಾಂಡ’ ಟ್ರೈಲರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಯೂಟ್ಯೂಬ್ ನಲ್ಲಿ ಧೂಳೆಬ್ಬಿಸಿದ ‘ರಾಜ ಮಾರ್ತಾಂಡ’ ಟ್ರೈಲರ್

ಚಿರಂಜೀವಿ ಸರ್ಜಾ ಅಭಿನಯದ ‘ರಾಜಮಾರ್ತಾಂಡ’ ಸಿನಿಮಾ ಇದೇ ಅಕ್ಟೋಬರ್ 6 ರಂದು ರಾಜ್ಯದ್ಯಂತ ತೆರೆ ಕಾಣುತ್ತಿದ್ದು, ನಿನ್ನೆಯಷ್ಟೇ ಈ ಚಿತ್ರದ ಟ್ರೈಲರ್ ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ರಿಲೀಸ್ ಮಾಡಲಾಗಿದೆ.

ಈ ಟ್ರೈಲರ್ ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಸಾಕಷ್ಟು ವೀಕ್ಷಣೆ ಪಡೆದುಕೊಳ್ಳುವ ಮೂಲಕ ಯೂಟ್ಯೂಬ್ ಟ್ರೆಂಡಿಂಗ್ ನಲ್ಲಿದೆ.

ಕೆ ರಾಮನಾರಾಯಣ್ ನಿರ್ದೇಶನದ ಈ ಚಿತ್ರವನ್ನು ಶ್ರೀ ಮಹದೇಶ್ವರ ಪ್ರೊಡಕ್ಷನ್ ಬ್ಯಾನರ್ ನಡಿ ನಿವೇದಿತಾ, ಪ್ರಣವ್ ಗೌಡ ಹಾಗೂ ಶಿವಕುಮಾರ್ ನಿರ್ಮಿಸಿದ್ದಾರೆ.

ಅರ್ಜುನ್ ಜನ್ಯ ಸಂಗೀತ ಸಂಯೋಜನೆ ನೀಡಿದ್ದು, ಚಿರಂಜೀವಿ ಸರ್ಜಾ ಹಾಗೂ ದೀಪ್ತಿ ಮುಖ್ಯ ಭೂಮಿಕೆಯಲ್ಲಿದ್ದಾರೆ. ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಈ ಸಿನಿಮಾದಲ್ಲಿ ತಮ್ಮ ಅಣ್ಣನಿಗೆ ಧ್ವನಿ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...