alex Certify ಅಕ್ಟೋಬರ್ 6ರಂದು ‘ರಾಜ ಮಾರ್ತಾಂಡ’ ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಕ್ಟೋಬರ್ 6ರಂದು ‘ರಾಜ ಮಾರ್ತಾಂಡ’ ರಿಲೀಸ್

ಕೆ ರಾಮನಾರಾಯಣ್ ನಿರ್ದೇಶನದ ಚಿರಂಜೀವಿ ಸರ್ಜಾ ಅಭಿನಯದ ‘ರಾಜ ಮಾರ್ತಾಂಡ’ ಸಿನಿಮಾ ಮುಂದಿನ ತಿಂಗಳು ಅಕ್ಟೋಬರ್ 6ರಂದು ರಾಜ್ಯದಾದ್ಯಂತ ತೆರೆ ಕಾಣಲಿದೆ. ಈ ಕುರಿತು ಚಿತ್ರ ತಂಡ ಸಾಮಾಜಿಕ ಜಾಲತಾಣದಲ್ಲಿ ಘೋಷಣೆ ಮಾಡಿದ್ದು, ಚಿರಂಜೀವಿ ಸರ್ಜಾ ಅಭಿಮಾನಿಗಳು ಸಂಭ್ರಮಿಸಿದ್ದಾರೆ.

ಈ ಚಿತ್ರದಲ್ಲಿ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ತಮ್ಮ ಅಣ್ಣನಿಗೆ ಧ್ವನಿ ನೀಡಿದ್ದು, ಶ್ರೀ ಮಹದೇಶ್ವರ ಪ್ರೊಡಕ್ಷನ್ ಬ್ಯಾನರ್ ನಡಿ ಪ್ರಣವ್ ಗೌಡ, ನಿವೇದಿತ, ಮತ್ತು ಶಿವಕುಮಾರ್ ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ.

ಅರ್ಜುನ್ ಜನ್ಯ ಸಂಗೀತ ಸಂಯೋಜನೆ ನೀಡಿರುವ ಈ ಸಿನಿಮಾದಲ್ಲಿ ಚಿರಂಜೀವಿ ಸರ್ಜಾ ಸೇರಿದಂತೆ ದೀಪ್ತಿ, ಡೈನಾಮಿಕ್ ಸ್ಟಾರ್ ದೇವರಾಜ್, ಚಿಕ್ಕಣ್ಣ ತೆರೆ ಹಂಚಿಕೊಂಡಿದ್ದಾರೆ. ಚಿರಂಜೀವಿ ಸರ್ಜಾ ಅವರನ್ನು ತೆರೆ ಮೇಲೆ ವೀಕ್ಷಿಸಲು ಅವರ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...