
ಯಾದಗಿರಿ: ಸುರಪುರ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ(67) ನಿನ್ನೆ ಹೃದಯಾಘಾತದಿಂದ ನಿಧನರಾಗಿದ್ದು, ವಸಂತ ಮಹಲ್ ನಿವಾಸದಲ್ಲಿ ಪಾರ್ಥಿವ ಶರೀರಕ್ಕೆ ಕುಟುಂಬಸ್ಥರು ಪೂಜೆ ಸಲ್ಲಿಸಿದ್ದಾರೆ.
ಬೆಳಗ್ಗೆ 7 ಗಂಟೆಯಿಂದ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಯಾದಗಿರಿ ಜಿಲ್ಲೆ ಸುರಪುರದ ಪ್ರಭು ಕಾಲೇಜಿನಲ್ಲಿ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಸಂಜೆ 4 ಗಂಟೆಗೆ ಮಗರದಲ್ಲಿ ಸರ್ಕಾರಿ ಗೌರವದೊಂದಿಗೆ ಪ್ಯಾಪ್ಲಿ ರಾಜ ಮನೆತನದ ಸಂಪ್ರದಾಯದಂತೆ ಅಂತ್ಯಕ್ರಿಯೆ ನೆರವೇರಿಸಲಾಗುತ್ತದೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್, ಸಚಿವರು, ಶಾಸಕರು ಅಂತ್ಯಕ್ರಿಯೆಯಲ್ಲಿ ಭಾಗವಹಿಸಲಿದ್ದಾರೆ ಎಂದು ರಾಜಾ ವೆಂಕಟಪ್ಪ ನಾಯಕ ಆಪ್ತ ರಾಜಶೇಖರ ಗೌಡ ವಜ್ಜಲ್ ಮಾಹಿತಿ ನೀಡಿದ್ದಾರೆ.