ಯಾದಗಿರಿ: ನಿನ್ನೆ ವಿಧಿವಶರಾದ ಯಾದಗಿರಿ ಜಿಲ್ಲೆ ಸುರಪುರ ಕ್ಷೇತ್ರದ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ ಪಂಚಭೂತಗಳಲ್ಲಿ ಲೀನರಾಗಿದ್ದಾರೆ.
ಸುರಪುರ ಪಟ್ಟಣದ ರಾಜಮನೆತನದ ರುದ್ರಭೂಮಿಯಲ್ಲಿ ಅಂತ್ಯಸಂಸ್ಕಾರ ನೆರವೇರಿಸಲಾಗಿದೆ. ಗೋಸಲ ರಾಜವಂಶದ ಸಂಪ್ರದಾಯದಂತೆ ಅಂತ್ಯಸಂಸ್ಕಾರ ನೆರವೇರಿದ್ದು, ಹಿರಿಯ ಪುತ್ರ ರಾಜ ವೇಣುಗೋಪಾಲ ನಾಯಕ ಚಿತೆಗೆ ಅಗ್ನಿಸ್ಪರ್ಶ ಮಾಡಿದ್ದಾರೆ. ಕುಟುಂಬಸ್ಥರು, ಬಂಧು- ಮಿತ್ರರು, ಗಣ್ಯರು, ಸಾವಿರಾರು ಬೆಂಬಲಿಗರು ಉಪಸ್ಥಿತರಿದ್ದರು.
ನಿನ್ನೆ ಹೃದಯಾಘಾತದಿಂದ ರಾಜಾ ವೆಂಕಟಪ್ಪ ನಾಯಕ ವಿಧಿವಶರಾಗಿದ್ದರು. ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ನಿಧನರಾಗಿದ್ದು, ಸುರಪುರಕ್ಕೆ ಮೃತದೇಹ ತಂದು ಸಾರ್ವಜನಿಕರ ಅಂತಿಮ ದರ್ಶನದ ನಂತರ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಗಿದೆ.