alex Certify BREAKING: ಪಂಚಭೂತಗಳಲ್ಲಿ ಲೀನರಾದ ಸುರಪುರ ಶಾಸಕ ರಾಜಾ ವೆಂಕಟಪ್ಪ ನಾಯಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಪಂಚಭೂತಗಳಲ್ಲಿ ಲೀನರಾದ ಸುರಪುರ ಶಾಸಕ ರಾಜಾ ವೆಂಕಟಪ್ಪ ನಾಯಕ

ಯಾದಗಿರಿ: ನಿನ್ನೆ ವಿಧಿವಶರಾದ ಯಾದಗಿರಿ ಜಿಲ್ಲೆ ಸುರಪುರ ಕ್ಷೇತ್ರದ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ ಪಂಚಭೂತಗಳಲ್ಲಿ ಲೀನರಾಗಿದ್ದಾರೆ.

ಸುರಪುರ ಪಟ್ಟಣದ ರಾಜಮನೆತನದ ರುದ್ರಭೂಮಿಯಲ್ಲಿ ಅಂತ್ಯಸಂಸ್ಕಾರ ನೆರವೇರಿಸಲಾಗಿದೆ. ಗೋಸಲ ರಾಜವಂಶದ ಸಂಪ್ರದಾಯದಂತೆ ಅಂತ್ಯಸಂಸ್ಕಾರ ನೆರವೇರಿದ್ದು, ಹಿರಿಯ ಪುತ್ರ ರಾಜ ವೇಣುಗೋಪಾಲ ನಾಯಕ ಚಿತೆಗೆ ಅಗ್ನಿಸ್ಪರ್ಶ ಮಾಡಿದ್ದಾರೆ. ಕುಟುಂಬಸ್ಥರು, ಬಂಧು- ಮಿತ್ರರು, ಗಣ್ಯರು, ಸಾವಿರಾರು ಬೆಂಬಲಿಗರು ಉಪಸ್ಥಿತರಿದ್ದರು.

ನಿನ್ನೆ ಹೃದಯಾಘಾತದಿಂದ ರಾಜಾ ವೆಂಕಟಪ್ಪ ನಾಯಕ ವಿಧಿವಶರಾಗಿದ್ದರು. ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ನಿಧನರಾಗಿದ್ದು, ಸುರಪುರಕ್ಕೆ ಮೃತದೇಹ ತಂದು ಸಾರ್ವಜನಿಕರ ಅಂತಿಮ ದರ್ಶನದ ನಂತರ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...