ಬೆಂಗಳೂರು: ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಕ್ರಮ ಖಂಡಿಸಿ ಹಾಗೂ ಬಿಜೆಪಿ, ಜೆಡಿಎಸ್ ನಾಯಕರ ವಿರುದ್ಧದ ಪ್ರಕರಣಗಳ ಸಂಬಂಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವಂತೆ ಒತ್ತಾಯಿಸಿ ಕಾಂಗ್ರೆಸ್ ನಾಯಕರು ರಾಜಭವನ ಚಲೋ ನಡೆಸಿದ್ದ ಬೆನ್ನಲ್ಲೇ ರಾಜಭವನ ಮಹತ್ವದ ಮಾಹಿತಿ ನೀಡಿದೆ.
ರಾಜಭವನ ಕಚೇರಿಯಲ್ಲಿ ಯಾವುದೇ ಪ್ರಕರಣಗಳ ಪ್ರಾಸಿಕ್ಯೂಷನ್ ಅರ್ಜಿ ಬಾಕಿ ಇಲ್ಲ ಎಂದು ಸ್ಪಷ್ಟಪಡಿಸಿದೆ. ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಮುರುಗೇಶ್ ನಿರಾಣಿ, ಶಶಿಕಲಾ ಜೊಲ್ಲೆ, ಜನಾರ್ಧನ ರೆಡ್ಡಿ ಸೇರಿ ಯಾರ ವಿರುದ್ಧದ ಪ್ರಕರಣಗಳ ಕುರಿತ ಪ್ರಾಸಿಕ್ಯೂಷನ್ ಕಡತ ಬಾಕಿ ಇಲ್ಲ ಎಂದು ತಿಳಿಸಿದೆ.
ರಾಜಭವನದ ಈ ಹೇಳಿಕೆ ಕುತೂಹಲ ಮೂಡಿಸಿದೆ. ವಿಪಕ್ಷ ನಾಯಕರ ವಿರುದ್ಧ ಪ್ರಕರಣಗಳ ಬಗ್ಗೆ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡುತ್ತಿಲ್ಲ ಎಂದು ಆಡಳಿತಾರೂಢ ಕಾಂಗ್ರೆಸ್ ಆರೋಪಿಸಿ ಪ್ರತಿಭಟನೆ ನಡೆಸಿತ್ತು. ಆದರೆ ಯಾವುದೇ ಕಡತ ಬಾಕಿ ಇಲ್ಲ ಎಂದು ರಾಜಭವನ ತಿಳಿಸಿದೆ. ಸರ್ಕಾರ ಹಾಗೂ ರಾಜಭವನಗಳ ಹೇಳಿಕೆಗಳು ಅಚ್ಚರಿಗೆ ಕಾರಣವಾಗಿದೆ.