ಕೋಟಾ: ರಾಜಸ್ಥಾನದ ಕೋಟಾದಲ್ಲಿ 16 ವರ್ಷದ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. 2023 ರಲ್ಲಿ ಇಲ್ಲಿಯವರೆಗೆ ಮೃತಪಟ್ಟವರ ಸಂಖ್ಯೆ 25ಕ್ಕೇರಿದೆ.
ಹೌದು, ರಾಜಸ್ಥಾನದ ಕೋಟಾದಲ್ಲಿ ಮತ್ತೊಂದು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ಬೆಳಕಿಗೆ ಬಂದಿದೆ. 16 ವರ್ಷದ ವಿದ್ಯಾರ್ಥಿನಿ ತನ್ನ ಹಾಸ್ಟೆಲ್‌ನ ಕೊಠಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಬಾಲಕಿ ದೆಹಲಿ ಮೂಲದವಳಾಗಿದ್ದಾಳೆ ಎಂದು ತಿಳಿದು ಬಂದಿದೆ.
ಕಳೆದ ಎಂಟು ತಿಂಗಳಲ್ಲಿ ಇದು 25ನೇ ಆತ್ಮಹತ್ಯೆ ಪ್ರಕರಣವಾಗಿದೆ. ಕೋಟಾದ ಹಾಸ್ಟೆಲ್‌ನಲ್ಲಿ ಬಾಲಕಿ ತನ್ನ ಕೋಣೆಯೊಳಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಈಕೆ ನೀಟ್ ಪ್ರವೇಶ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದಳು ಎನ್ನಲಾಗಿದೆ. ಸಾವಿಗೆ ಏನು ಕಾರಣ ಎಂದು ಮತ್ತಷ್ಟು ಮಾಹಿತಿ ತಿಳಿದುಬರಬೇಕಿದೆ.