ಜೈಪುರ್: ಆಂಬುಲೆನ್ಸ್ ನಲ್ಲಿ 22 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ರಾಜಸ್ಥಾನದಲ್ಲಿ ನಡೆದಿದೆ.
ಆಂಬುಲೆನ್ಸ್ ಚಾಲಕ ಮತ್ತು ಕ್ಲೀನರ್ ಅತ್ಯಾಚಾರ ಎಸಗಿದ ಆರೋಪಿಗಳಾಗಿದ್ದಾರೆ. ಆಹಾರ ನೀಡುವುದಾಗಿ ಯುವತಿಗೆ ಆಮಿಷವೊಡ್ಡಿದ ಆರೋಪಿಗಳು ಆಕೆಯನ್ನು ಆಂಬುಲೆನ್ಸ್ ನಲ್ಲಿ ಕರೆದುಕೊಂಡು ನಿರ್ಜನ ಪ್ರದೇಶಕ್ಕೆ ತೆರಳಿದ್ದಾರೆ. ನಿರ್ಜನ ಪ್ರದೇಶದಲ್ಲಿ ಆಂಬುಲೆನ್ಸ್ ನಲ್ಲೇ ದುಷ್ಕರ್ಮಿಗಳು ಇಂತಹ ಕೃತ್ಯವೆಸಗಿದ್ದಾರೆ.
ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದು, ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. ಮಹಿಳೆಯ ಹೇಳಿಕೆ ದಾಖಲಿಸಿಕೊಂಡಿದ್ದು, ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಮೋತಿ ಡೋಂಗ್ರಿ ಪೊಲೀಸ್ ಠಾಣೆ ಅಧಿಕಾರಿ ಸುರೇಂದ್ರ ಪಾಂಚೋಲಿ ತಿಳಿಸಿದ್ದಾರೆ.