alex Certify ವ್ಯಾನ್ -ಬಸ್ ಮುಖಾಮುಖಿ ಡಿಕ್ಕಿ: 7 ಮಂದಿ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವ್ಯಾನ್ -ಬಸ್ ಮುಖಾಮುಖಿ ಡಿಕ್ಕಿ: 7 ಮಂದಿ ಸಾವು

ರಾಜಸ್ಥಾನದ ಹೊಸದಾಗಿ ರೂಪುಗೊಂಡ ದೀದ್ವಾನಾ-ಕುಚಾಮನ್ ಜಿಲ್ಲೆಯಲ್ಲಿ ಶನಿವಾರ ಬಸ್‌ ಗೆ ವ್ಯಾನ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ 7 ಜನರು ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಮತ್ತು ಇಬ್ಬರು ಗಾಯಗೊಂಡಿದ್ದಾರೆ.

ಖುಂಖುನಾ ಪೊಲೀಸ್ ಠಾಣಾ ವ್ಯಾಪ್ತಿಯ ಬಂಥಾಡಿ ಗ್ರಾಮದ ಬಳಿ ಈ ಘಟನೆ ನಡೆದಿದೆ. ಗಾಯಗೊಂಡ ಇಬ್ಬರು ಪ್ರಯಾಣಿಕರನ್ನು ಬಂಗಾರ್ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿಂದ ಅವರನ್ನು ಜೈಪುರಕ್ಕೆ ಸ್ಥಳಾಂತರಿಸಲಾಗಿದೆ ಎಂದು ಡಿಎಸ್ಪಿ ಧರಂಚಂದ್ ಬಿಷ್ಣೋಯ್ ಹೇಳಿದ್ದಾರೆ.

ಅಪಘಾತದಲ್ಲಿ ಬಲಿಯಾದವರೆಲ್ಲರೂ ವ್ಯಾನ್‌ನಲ್ಲಿ ಮದುವೆ ಸಮಾರಂಭದಲ್ಲಿ ಭಾಗವಹಿಸಲು ಸಿಕಾರ್‌ನಿಂದ ನಾಗೌರ್‌ಗೆ ಪ್ರಯಾಣಿಸುತ್ತಿದ್ದರು ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...