alex Certify BIG NEWS: ಪ್ಯಾರಾಲಂಪಿಕ್ಸ್ ಚಿನ್ನದ ಪದಕ ವಿಜೇತೆಗೆ 3 ಕೋಟಿ ರೂ. ಬಹುಮಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪ್ಯಾರಾಲಂಪಿಕ್ಸ್ ಚಿನ್ನದ ಪದಕ ವಿಜೇತೆಗೆ 3 ಕೋಟಿ ರೂ. ಬಹುಮಾನ

ಜೈಪುರ: ಟೋಕಿಯೋ ಪ್ಯಾರಾಲಿಂಪಿಕ್ಸ್ ಪದಕ ವಿಜೇತರಿಗೆ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಭರ್ಜರಿ ಬಹುಮಾನ ಘೋಷಿಸಿದ್ದಾರೆ.

ಚಿನ್ನದ ಪದಕ ವಿಜೇತರಿಗೆ 3 ಕೋಟಿ ರೂ., ಬೆಳ್ಳಿ ಪದಕ ವಿಜೇತರಿಗೆ 2 ಕೋಟಿ ರೂ. ಹಾಗೂ ಕಂಚು ಪದಕ ವಿಜೇತರಿಗೆ 1 ಕೋಟಿ ನಗದು ಬಹುಮಾನ ನೀಡುವುದಾಗಿ ಘೋಷಿಸಿದ್ದಾರೆ. ಚಿನ್ನದ ಪದಕ ಗೆದ್ದಿದ್ದಕ್ಕೆ ಅವನಿ ಲೇಖರಾಗೆ 3 ಕೋಟಿ ಬಹುಮಾನ, ಬೆಳ್ಳಿ ಗೆದ್ದಿರುವ ದೇವೇಂದ್ರ ಜಜಾರಿಯಾ ಅವರಿಗೆ 2 ಕೋಟಿ ಹಾಗೂ ಕಂಚಿನ ಪದಕ ಗೆದ್ದಿರುವ ಸುಂದರ್ ಸಿಂಗ್ ಅವರಿಗೆ 1 ಕೋಟಿ ಬಹುಮಾನ ನೀಡಲಾಗುವುದು ಎಂದು ಸಿಎಂ ಹೇಳಿದ್ದಾರೆ.

ರಾಜ್ಯ ಸರಕಾರದ ಅರಣ್ಯ ಇಲಾಖೆಯಲ್ಲಿ ಮೂವರು ಆಟಗಾರರನ್ನು ಈಗಾಗಲೇ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ (ಎಸಿಎಫ್) ಹುದ್ದೆಗೆ ನೇಮಿಸಲಾಗಿದೆ ಎಂದು ಈ ವೇಳೆ ಸಿಎಂ ಗೆಹ್ಲೋಟ್ ಹೇಳಿದರು.

ಭಾರತೀಯ ಶೂಟರ್ ಅವನಿ ಲೇಖರಾ ಸೋಮವಾರ ನಡೆದ ಮಹಿಳಾ ಆರ್2 – 10 ಮೀ. ಏರ್ ರೈಫಲ್ ಸ್ಟ್ಯಾಂಡ್ ಎಸ್ ಎಚ್ 1 ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆಲ್ಲುವ ಮೂಲಕ ಇತಿಹಾಸ ಸೃಷ್ಟಿಸಿದರು. 19 ವರ್ಷದ ಅವನಿ, ಪ್ಯಾರಾಲಿಂಪಿಕ್ಸ್ ನಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಮಹಿಳೆ ಎಂಬ ಖ್ಯಾತಿಗೆ ಪಾತ್ರರಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...