ಜೈಪುರ: ಬ್ಲಾಕ್ ಫಂಗಸ್ ಸಾಂಕ್ರಾಮಿಕ ರೋಗವೆಂದು ರಾಜಸ್ಥಾನ ಸರ್ಕಾರ ತೀರ್ಮಾನಿಸಿದೆ. ಕೊರೋನಾ ಸೋಂಕಿತರಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿರುವ ಬ್ಲಾಕ್ ಫಂಗಸ್ ರಾಜಸ್ಥಾನದಲ್ಲಿ ಆತಂಕ ಮೂಡಿಸಿದೆ.
ರಾಜಸ್ಥಾನದಲ್ಲಿ ಬ್ಲಾಕ್ ಫಂಗಸ್ ರೋಗಿಗಳಿಗೆ ಪ್ರತ್ಯೇಕ ವಾರ್ಡ್ ಗಳನ್ನು ನಿರ್ಮಿಸಿ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ರಾಜಸ್ಥಾನ ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಅಖಿಲ್ ಆರೋರಾ ಅವರು, ಬ್ಲಾಕ್ ಸಾಂಕ್ರಮಿಕ ರೋಗವೆಂದು ಅಧಿಸೂಚನೆ ಹೊರಡಿಸಿದ್ದಾರೆ. ರಾಜಸ್ಥಾನ ಸಾಂಕ್ರಾಮಿಕ ರೋಗಗಳ ಕಾಯ್ದೆ 2020 ರ ಅಡಿಯಲ್ಲಿ ಬ್ಲಾಕ್ ಫಂಗಸ್ ಸಾಂಕ್ರಾಮಿಕ ರೋಗವೆಂದು ಪರಿಗಣಿಸಲಾಗಿದೆ.
ಪ್ರಸ್ತುತ ರಾಜ್ಯದಲ್ಲಿ 100 ಕಪ್ಪು ಶಿಲೀಂದ್ರ ರೋಗಿಗಳಿದ್ದು, ಅವರ ಚಿಕಿತ್ಸೆಗಾಗಿ ಜೈಪುರದ ಸವಾಯ್ ಮಾನಸಿಂಗ್ ಆಸ್ಪತ್ರೆಯಲ್ಲಿ ಪ್ರತ್ಯೇಕ ವಾರ್ಡ್ ರಚಿಸಲಾಗಿದೆ. ತಜ್ಞರ ಪ್ರಕಾರ ಮಧುಮೇಹ ಇರುವವರು ಕಪ್ಪು ಶಿಲಿಂದ್ರ ಸೋಂಕಿಗೆ ಒಳಗಾಗುವ ಸಾಧ್ಯತೆ ಹೆಚ್ಚಾಗಿದೆ.