ರಾಜಸ್ಥಾನದ ಅಲ್ವಾರ್ ಜಿಲ್ಲೆಯ ಮಸೀದಿಯೊಂದರಲ್ಲಿ ಐದು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಧರ್ಮಗುರುವನ್ನು ಭಾನುವಾರ ಬಂಧಿಸಲಾಗಿದೆ.
ಬಾಲಕಿ ತನ್ನ ನಿವಾಸದ ಹೊರಗೆ ಆಟವಾಡುತ್ತಿದ್ದಾಗ, ಮಸೀದಿಯಲ್ಲಿ ಮೌಲ್ವಿಯಾಗಿರುವ ಆರೋಪಿ 22 ವರ್ಷದ ಅಸ್ಜದ್ ಆಕೆಯನ್ನು ಮಸೀದಿಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಆಕೆಯ ತಾಯಿ ಬಾಲಕಿಯನ್ನು ಹುಡುಕಿಕೊಂಡು ಅವರ ಮನೆಯ ಎದುರು ಇರುವ ಮಸೀದಿಯೊಳಗೆ ಹೋದಾಗ ವಿಷಯ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ರಾಜ್‌ಗಢ ಎಸ್‌ಹೆಚ್‌ಒ ರಾಮಜಿಲಾಲ್ ಮೀನಾ ತಿಳಿಸಿದ್ದಾರೆ.