alex Certify ದೂರವಾದ ಪತ್ನಿ, ಕಾಮದ ಮದದಲ್ಲಿ ತಂದೆಯಿಂದಲೇ ಪುತ್ರಿ ಮೇಲೆ ಪದೇ ಪದೇ ಅತ್ಯಾಚಾರ: ಮೂಗು ಕಚ್ಚಿ ಹಲ್ಲೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದೂರವಾದ ಪತ್ನಿ, ಕಾಮದ ಮದದಲ್ಲಿ ತಂದೆಯಿಂದಲೇ ಪುತ್ರಿ ಮೇಲೆ ಪದೇ ಪದೇ ಅತ್ಯಾಚಾರ: ಮೂಗು ಕಚ್ಚಿ ಹಲ್ಲೆ

ಜೈಪುರ್: ರಾಜಸ್ಥಾನದ ಜೋಧಪುರದಲ್ಲಿ ನಡೆದ ಆಘಾತಕಾರಿ ಘಟನೆಯಲ್ಲಿ ವ್ಯಕ್ತಿಯೊಬ್ಬ ತನ್ನ 15 ವರ್ಷದ ಮಗಳ ಮೇಲೆ ನಿರಂತರ ಅತ್ಯಾಚಾರ ಎಸಗಿದ್ದಾನೆ. ಅಲ್ಲದೆ ಬಾಲಕಿ ಮೂಗು ಕಚ್ಚಿ ಮೇಲೆ ದೈಹಿಕವಾಗಿ ಹಲ್ಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.

ಪದೇ ಪದೇ ತಂದೆಯ ಕಿರುಕುಳದಿಂದ ಬೇಸತ್ತ ಬಾಲಕಿ ಪೊಲೀಸರನ್ನು ಸಂಪರ್ಕಿಸಿ ದೂರು ನೀಡಿದ್ದಾಳೆ. ಪ್ರಕರಣದ ತನಿಖೆ ನಡೆಸಿರುವ ಅಧಿಕಾರಿ ಪರಮೇಶ್ವರಿ ನೀಡಿರುವ ಮಾಹಿತಿಯಂತೆ, 45 ವರ್ಷದ ವ್ಯಕ್ತಿ ಬಾಲಕಿಯ ಮೂಗು ಕಚ್ಚಿ ಗಾಯಗೊಳಿಸಿದ್ದಾನೆ. ಬಾಲಕಿ ಸಾಮಾಜಿಕ ಕಾರ್ಯಕರ್ತರೊಬ್ಬರಿಗೆ ತನ್ನ ಸಂಕಷ್ಟ ಹೇಳಿಕೊಂಡಿದ್ದು, ತಂದೆಯಿಂದಲೇ ಪದೇಪದೇ ಅತ್ಯಾಚಾರಕ್ಕೆ ಒಳಗಾಗಿರುವುದಾಗಿ ತಿಳಿಸಿದ್ದಾಳೆ.

ಏಪ್ರಿಲ್ 6 ರಂದು ಆಸ್ಪತ್ರೆಗೆ ದಾಖಲಾಗಿದ್ದ ಸಂದರ್ಭದಲ್ಲಿ ಬಾಲಕಿ ಕಾರ್ಯಕರ್ತೆಯೊಂದಿಗೆ ಮಾತನಾಡಿದ್ದಾಳೆ. ಬಾಲಕಿಯ ಪೋಷಕರು ಬೇರೆ ಬೇರೆಯಾಗಿದ್ದು, ಆಕೆ ತನ್ನ ತಂದೆ, ಚಿಕ್ಕಪ್ಪ-ಚಿಕ್ಕಮ್ಮ ಮತ್ತು ಅಜ್ಜಿಯೊಂದಿಗೆ ಲೂನಿಯಲ್ಲಿ ವಾಸವಾಗಿದ್ದಾಳೆ.

ಎರಡು ವರ್ಷಗಳ ಹಿಂದೆ ಬಾಲಕಿ 13 ವರ್ಷದವಳಿದ್ದಾಗ ತಂದೆ ಅತ್ಯಾಚಾರ ಎಸಗಿದ್ದಾನೆ. ಬಳಿಕ ಪದೇ ಪದೇ ಅತ್ಯಾಚಾರ ಎಸಗಿದ್ದಾನೆ. ಆರೋಪಿ ವಿರುದ್ಧ ಪೋಕ್ಸೋ ಕಾಯ್ದೆ ಮತ್ತು ಐಪಿಸಿ ಅಡಿಯಲ್ಲಿ ಕೇಸು ದಾಖಲಿಸಲಾಗಿದೆ. ಪೊಲೀಸರು ಶೀಘ್ರವೇ ಬಾಲಕಿಯಿಂದ ಹೇಳಿಕೆ ಪಡೆಯಲಿದ್ದಾರೆ ಎಂದು ಪರಮೇಶ್ವರಿ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...