ತನ್ನ ಮಗಳು ಹಿಂದೂ ಯುವಕನನ್ನು ಪ್ರೀತಿಸಿ ಮದುವೆಯಾದಳೆಂಬ ಕಾರಣಕ್ಕೆ ಮುಸ್ಲಿಂ ಧರ್ಮಕ್ಕೆ ಸೇರಿದ ತಂದೆ ತನ್ನ ಮಗಳಿಗೆ ಆಟೋ ಡಿಕ್ಕಿ ಹೊಡೆಸಿ ಹತ್ಯೆ ಮಾಡಲು ಮುಂದಾದ ಘಟನೆ ರಾಜಸ್ಥಾನದಲ್ಲಿ ನಡೆದಿದ್ದು, ಇದರ ಶಾಕಿಂಗ್ ದೃಶ್ಯಾವಳಿ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.
ಭರತ್ಪುರದಲ್ಲಿ ಈ ಘಟನೆ ನಡೆದಿದ್ದು, ಯುವತಿ ತನ್ನ ಪತಿಯೊಂದಿಗೆ ನಡೆದು ಹೋಗುತ್ತಿದ್ದ ವೇಳೆ ಆಟೋದಲ್ಲಿ ಹಿಂಬಾಲಿಸಿಕೊಂಡು ಬಂದ ಆಕೆಯ ತಂದೆ ಡಿಕ್ಕಿ ಹೊಡೆಸಲು ಯತ್ನಿಸಿದ್ದಾನೆ. ಇದರಿಂದ ಗಾಬರಿಗೊಂಡ ಅವರಿಬ್ಬರೂ ದಿಕ್ಕಾಪಾಲಾಗಿ ಓಡಿದ್ದಾರೆ.
ಮದುವೆಯ ಸಂದರ್ಭದಲ್ಲಿ ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದ ಯುವತಿ ತಂದೆ ಈ ಹಿಂದೆ ಹಲ್ಲೆಗೆ ಯತ್ನಿಸಿದ್ದ ಎನ್ನಲಾಗಿದೆ. ಈ ಕುರಿತಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣವೂ ದಾಖಲಾಗಿದ್ದು ದಂಪತಿ ರಕ್ಷಣೆ ಕೋರಿದ್ದರು. ಇದರ ಮಧ್ಯೆ ಈಗ ಕೊಲೆ ಮಾಡಲು ಯತ್ನಿಸಿದ್ದು, ಪೊಲೀಸರು ಆರೋಪಿಯ ಬಂಧನಕ್ಕೆ ಮುಂದಾಗಿದ್ದಾರೆ.