alex Certify SHOCKING: ಅನ್ಯ ಧರ್ಮೀಯ ವಿವಾಹವಾದ ಮಗಳನ್ನು ಹತ್ಯೆ ಮಾಡಲು ಮುಂದಾದ ತಂದೆ; ಆಘಾತಕಾರಿ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING: ಅನ್ಯ ಧರ್ಮೀಯ ವಿವಾಹವಾದ ಮಗಳನ್ನು ಹತ್ಯೆ ಮಾಡಲು ಮುಂದಾದ ತಂದೆ; ಆಘಾತಕಾರಿ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ

ತನ್ನ ಮಗಳು ಹಿಂದೂ ಯುವಕನನ್ನು ಪ್ರೀತಿಸಿ ಮದುವೆಯಾದಳೆಂಬ ಕಾರಣಕ್ಕೆ ಮುಸ್ಲಿಂ ಧರ್ಮಕ್ಕೆ ಸೇರಿದ ತಂದೆ ತನ್ನ ಮಗಳಿಗೆ ಆಟೋ ಡಿಕ್ಕಿ ಹೊಡೆಸಿ ಹತ್ಯೆ ಮಾಡಲು ಮುಂದಾದ ಘಟನೆ ರಾಜಸ್ಥಾನದಲ್ಲಿ ನಡೆದಿದ್ದು, ಇದರ ಶಾಕಿಂಗ್ ದೃಶ್ಯಾವಳಿ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.

ಭರತ್ಪುರದಲ್ಲಿ ಈ ಘಟನೆ ನಡೆದಿದ್ದು, ಯುವತಿ ತನ್ನ ಪತಿಯೊಂದಿಗೆ ನಡೆದು ಹೋಗುತ್ತಿದ್ದ ವೇಳೆ ಆಟೋದಲ್ಲಿ ಹಿಂಬಾಲಿಸಿಕೊಂಡು ಬಂದ ಆಕೆಯ ತಂದೆ ಡಿಕ್ಕಿ ಹೊಡೆಸಲು ಯತ್ನಿಸಿದ್ದಾನೆ. ಇದರಿಂದ ಗಾಬರಿಗೊಂಡ ಅವರಿಬ್ಬರೂ ದಿಕ್ಕಾಪಾಲಾಗಿ ಓಡಿದ್ದಾರೆ.

ಮದುವೆಯ ಸಂದರ್ಭದಲ್ಲಿ ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದ ಯುವತಿ ತಂದೆ ಈ ಹಿಂದೆ ಹಲ್ಲೆಗೆ ಯತ್ನಿಸಿದ್ದ ಎನ್ನಲಾಗಿದೆ. ಈ ಕುರಿತಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣವೂ ದಾಖಲಾಗಿದ್ದು ದಂಪತಿ ರಕ್ಷಣೆ ಕೋರಿದ್ದರು. ಇದರ ಮಧ್ಯೆ ಈಗ ಕೊಲೆ ಮಾಡಲು ಯತ್ನಿಸಿದ್ದು, ಪೊಲೀಸರು ಆರೋಪಿಯ ಬಂಧನಕ್ಕೆ ಮುಂದಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...