alex Certify ನೆರೆಮನೆಯಾತನಿಂದ ಪದೇ ಪದೇ ಫೋನ್‌ ಕಾಲ್;‌ ಬೇಸತ್ತ ವಿವಾಹಿತೆ ನೇಣಿಗೆ ಶರಣು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನೆರೆಮನೆಯಾತನಿಂದ ಪದೇ ಪದೇ ಫೋನ್‌ ಕಾಲ್;‌ ಬೇಸತ್ತ ವಿವಾಹಿತೆ ನೇಣಿಗೆ ಶರಣು

ನೆರೆ ಮನೆಯವನು ಫೋನ್​ ಮಾಡಿ ಪೀಡಿಸುತ್ತಿದ್ದಾನೆಂದು ಮನನೊಂದ ವಿವಾಹಿತೆ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆಯೊಂದು ವರದಿಯಾಗಿದೆ. ಪಕ್ಕದ ಮನೆಯಾತ ತನ್ನ ಪತ್ನಿಗೆ ದೂರವಾಣಿ ಕರೆ ಮಾಡಿ ತೊಂದರೆ ಕೊಡುತ್ತಿದ್ದ. ಇದೇ ಕಾರಣಕ್ಕೆ ಆಕೆ ಈ ಕಠಿಣ ನಿರ್ಧಾರ ಕೈಗೊಂಡಿದ್ದಾಳೆ ಎಂದು ಪತಿ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ಸುಮನ್​ ಎಂದು ಗುರುತಿಸಲಾಗಿದೆ. ಜೈಪುರದ ದೋಢ್​ ಪೊಲೀಸ್ ಠಾಣೆ ವ್ಯಾಪ್ತಿಯ ಲಾಡ್ವಾ ಗ್ರಾಮದಲ್ಲಿ ಘಟನೆ ನಡೆದಿದೆ.

ಶುಕ್ರವಾರ ಸಂಜೆ ಮನೆಯ ಕೋಣೆಯಲ್ಲಿ ಫ್ಯಾನ್​ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ.

ಮೃತ ಸುಮನ್​ ಪತಿ ಭನರಾಮ್​​​ ನೆರೆಮನೆಯ ಯುವಕ ಮುಕೇಶ್​ ವಿರುದ್ಧ ಆರೋಪ ಹೊರಿಸಿದ್ದಾರೆ. ನನ್ನ ಪತ್ನಿಗೆ ಪದೇ ಪದೇ ಕರೆ ಮಾಡುತ್ತಿದ್ದ ಮುಕೇಶ್​​ ಆಕೆಗೆ ಪೀಡಿಸುತ್ತಿದ್ದ ಎಂದು ಹೇಳಿದ್ದಾರೆ. ನಾಲ್ಕು ತಿಂಗಳ ಹಿಂದೆಯೂ ಭನರಾಮ್​ ಇದೇ ಕಾರಣಕ್ಕೆ ಮುಖೇಶ್​ ವಿರುದ್ಧ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದರು ಎನ್ನಲಾಗಿದೆ.

ಇನ್ನು ಈ ಪ್ರಕರಣದ ವಿಚಾರವಾಗಿ ಮಾತನಾಡಿದ ಪೊಲೀಸ್​ ಅಧಿಕಾರಿಗಳು ಆತ್ಮಹತ್ಯೆಗೆ ನಿಖರ ಕಾರಣವನ್ನು ತಿಳಿದುಕೊಳ್ಳಲು ವಿವಿಧ ಆಯಾಮಗಳಿಂದ ತನಿಖೆ ನಡೆಸುತ್ತಿದ್ದೇವೆ. ಮಹಿಳೆಯ ಕುಟುಂಬಸ್ಥರು ಹಾಗೂ ನೆರೆಹೊರೆಯವರ ವಿಚಾರಣೆಯನ್ನೂ ನಡೆಸಲಾಗುತ್ತದೆ. ಈ ಘಟನೆಯಿಂದ ಆಕೆಯ ಪತಿ ಆಘಾತಕ್ಕೊಳಗಾಗಿದ್ದಾರೆ. ಹೀಗಾಗಿ ಅವರನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಿಲ್ಲ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...